ಮೈಸೂರು : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಫೋಟೋ ಶೂಟ್ ನಡೆಸಿದ್ದಾನೆ. ಮೈಸೂರಿನ ಹಳೆ ಡಿಸಿ ಕಚೇರಿ ಕಟ್ಟಡದ ಬಳಿ ರಜತ್ ಫೋಟೋ ಶೂಟ್ ನಡೆಸಿದ್ದು, ಇದೀಗ ರಜತ್ ಕಿಶನ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಎಡವಟ್ಟಿಗೆ ಕಾರಣ ಏನೆಂದರೆ, ಫೋಟೋಶೂಟ್ ಮಾಡಿಸಿ ರಜತ್ ಇನ್ಸ್ಟಾಗ್ರಾಮ್ ನಲ್ಲಿ ಹಾಕಿಕೊಂಡಿದ್ದಾನೆ. ಧೂಮಪಾನ ಅಪಾಯಕಾರಿ ಸಂದೇಶ ಹಾಕದೆ ವಿಡಿಯೋ ಅಪ್ಲೋಡ್ ಮಾಡಿದ್ದಾನೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿಸಿದ್ದ. ಇದೀಗ ಮೈಸೂರಿನ ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಹಿಡಿದು ಪೋಸ್ ಕೊಟ್ಟು ಫೋಟೋ ಶೂಟ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.








