ಬೆಂಗಳೂರು: ಬೆಂಗಳೂರಿನಲ್ಲಿ ಇಟಲಿ ರಾಯಭಾರಿ ಕಚೇರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾನೆ.
ಬೆಂಗಳೂರಿನ ನಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಎಚ್ಚರಿಕೆ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಮತ್ತು ಬಾಂಬ್ ಪತ್ತೆ ದಳ ಆಗಮಿಸಿದ್ದು, ಇಡೀ ಪ್ರದೇಶವನ್ನು ತಪಾಸಣೆ ನಡೆಸುತ್ತಿದ್ದಾರೆ.ಮುನ್ನೆಚ್ಚರಿಕಾ ಕ್ರಮವಾಗಿ ರಾಯಭಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ.








