ಮೈಸೂರು : ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೆಇ ಕೆ.ಆರ್ ಚಂದ್ರಶೇಖರ್ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮೈಸೂರು ಪಾಲಿಕೆ ಮತ್ತು ಟಿ ನರಸೀಪುರ ತಾಲೂಕು ಕಚೇರಿಯ ಜೆಇ ಆಗಿರುವ ಚಂದ್ರಶೇಖರ್ ಅವರಿಗೆ ಸೇರಿದ ವಿಜಯನಗರ ನಿವಾಸ ಕೆ.ಜಿ ಕೊಪ್ಪಲು ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಟಿ ನರಸೀಪುರ ಕಚೇರಿ ಸೇರಿದಂತೆ ನಾಲ್ಕು ಕಡೆ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಪರಿಶೀಲನೆ ವೇಳೆ 60 ಲಕ್ಷ ನಗದು ಹಣ ಪತ್ತೆಯಾಗಿದೆ. ಇನ್ನು ಅಲ್ತಾಫ್ ಹುಸೇನ ಜಕಾರ್ತಿ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಬೆಸ್ಕಾಂ ನಲ್ಲಿ ಡೆಪ್ಯೂಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿರೋ ಆಲ್ತಾಫ್ ಹುಸೇನ್, ಜಕಾರ್ತಿಗೆ ಸೇರಿದ ಎರಡು ನಿವಾಸ ಹಾಗೂ ಕಚೇರಿಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ.








