ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಟಿಕೆಟ್ ಬೆಲೆ ಏರಿಕೆ ಮಾಡಿ BMRCL ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆ.9, ಸೋಮವಾರದಿಂದ ಹೊಸ ದರಗಳು ಜಾರಿಗೆ ಬರಲಿದ್ದು, ನಿರ್ವಹಣಾ ವೆಚ್ಚದ ಹೆಚ್ಚಳವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದರ ಏರಿಕೆಗೆ ಮೆಟ್ರೋ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ವಾರ್ಷಿಕ ದರ ಪರಿಷ್ಕರಣೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೆಟ್ರೋ ರೈಲ್ವೇಸ್ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ರಚಿತವಾದ ಮೊದಲ ದರ ನಿಗದಿ ಸಮಿತಿ (FFC) ಪ್ರಕಾರ ವಾರ್ಷಿಕ ದರ ಪರಿಷ್ಕರಣೆ ಪ್ರಕಟಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವಾರ್ಷಿಕ ದರ ಪರಿಷ್ಕರಣೆ. ಹೆಚ್ಚಿನ ವಿವರಿಗಳಿಗಾಗಿ ಮಾಧ್ಯಮ ಪ್ರಕಟಣೆಯನ್ನು ವೀಕ್ಷಿಸಿ. pic.twitter.com/hBxKlU2khs
— ನಮ್ಮ ಮೆಟ್ರೋ (@OfficialBMRCL) February 5, 2026
ದರ ನಿಗದಿ ಸಮಿತಿ (FFC) ಪ್ರಕಾರ BMRCLಗೆ 7.5 ವರ್ಷಗಳ ನಂತರ ಪರಿಷ್ಕೃತ ದರ ರಚನೆಯನ್ನು ಮತ್ತು 29 ರಿಂದ 10 ರವರೆಗಿನ ದರದ ವಲಯಗಳನ್ನು ಶಿಫಾರಸು ಮಾಡುವಾಗ ದರ ಪರಿಷ್ಕರಣೆ ಸರಾಸರಿ ಶೇ 51.55 ರಷ್ಟು ಹೆಚ್ಚಳಕ್ಕೆ ಕಾರಣವಾಯಿತು. ಭವಿಷ್ಯದಲ್ಲಿ ಇಂತಹ ದರ ಹೆಚ್ಚಳದ ಪರಿಸ್ಥಿತಿಯನ್ನು ತಪ್ಪಿಸುವ ದೃಷ್ಟಿಯೊಂದಿಗೆ, ಸಮಿತಿಯು ತನ್ನ ವರದಿಯಲ್ಲಿ ಪಾರದರ್ಶಕ ವಾರ್ಷಿಕ ಸ್ವಯಂಚಾಲಿತ ದರ ಪರಿಷ್ಕರಣೆ ಸೂತ್ರವನ್ನು, ವಾರ್ಷಿಕ ಕಾರ್ಯಾಚರಣೆ ಮತ್ತು ನಿರ್ವಹಣೆಯ ಶೇಕಡಾವಾರು ವೆಚ್ಚ ಅಥವಾ ವಾರ್ಷಿಕ ಶೇ 5 ಯಾವುದು ಕಡಿಮೆಯೋ ಮತ್ತು ಮುಂದಿನ ಒಂದು ರೂಪಾಯಿಗೆ ಪೂರ್ಣಾಂಕಗೊಳಿಸಿ ದರವನ್ನು ಪರಿಷ್ಕರಿಸಲು ಶಿಫಾರಸು ಮಾಡಿದೆ. ಈ ಕಾರ್ಯವಿಧಾನವು, ವಾರ್ಷಿಕವಾಗಿ ಅಲ್ಪ ದರ ಹೆಚ್ಚಳಕ್ಕೆ ಸಹಾಯ ಮಾಡುತ್ತದೆ.
BMRCL ಮೇಲೆ ಬದ್ಧವಾಗಿರುವ FFC ಯ ಶಿಫಾರಸುಗಳನ್ನು ಗಮನದಲ್ಲಿಟ್ಟುಕೊಂಡು, BMRCL ನಿಂದ FFC ಶಿಫಾರಸು ಮಾಡಲಾದ ದರಗಳನ್ನು ಜಾರಿಗೆ ತಂದ ದಿನಾಂಕದಿಂದ 1 ವರ್ಷ (9 ಫೆಬ್ರವರಿ 2025) ಮುಕ್ತಾಯಗೊಂಡ ನಂತರ, ಫೆಬ್ರವರಿ 9, 2026 ರಿಂದ ಜಾರಿಗೆ ಬರುವಂತೆ ವಾರ್ಷಿಕ ಸ್ವಯಂಚಾಲಿತ ದರ ಪರಿಷ್ಕರಣೆಯನ್ನು ಜಾರಿಗೆ ತರಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ. 96.10 ಕಿಮೀಗಳ ಸಂಪೂರ್ಣ ಜಾಲದಲ್ಲಿರುವ 10 ದರ ವಲಯಗಳಲ್ಲಿ ಕನಿಷ್ಠ ರೂ.1 ಮತ್ತು ಗರಿಷ್ಠ ರೂ.5 ರಷ್ಟು ಅಲ್ಪ ಹೆಚ್ಚಳವಾಗಿದೆ.
2024-25 (31 ಮಾರ್ಚ್ 2025) ಹಣಕಾಸು ವರ್ಷದ ಅಂಕಿ ಅಂಶಗಳನ್ನು, ಹಣಕಾಸು ವರ್ಷ 2023-24 (31 ಮಾರ್ಚ್ 2024) ರ ಅಂಕಿ ಅಂಶಗಳಿಗೆ ಹೋಲಿಸಿದರೆ, ಸೂತ್ರ-ಆಧಾರಿತ ದರ ಪರಿಷ್ಕರಣೆ ಶೇ 10.20ರಷ್ಟು ವೆಚ್ಚ ಹೆಚ್ಚಳವನ್ನು ಸೂಚಿಸುತ್ತದೆ. ಆದಾಗ್ಯೂ, FFC ನಿಬಂಧನೆಗೆ ಅನುಗುಣವಾಗಿ ದರ ಪರಿಷ್ಕರಣೆಯನ್ನು ಕೇವಲ ಶೇ 5% ಕ್ಕೆ ಸೀಮಿತಗೊಳಿಸಲಾಗಿದೆ.
ದಿನಾಂಕ 09.02.2026 ರಿಂದ ಅನ್ವಯವಾಗುವ ವಲಯವಾರು ಅಸ್ತಿತ್ವದಲ್ಲಿರುವ ಮತ್ತು ಪರಿಷ್ಕೃತ ದರಗಳು ಈ ಕೆಳಕಂಡಂತಿವೆ:










