ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಖಾಲಿ ಜಾಗದಲ್ಲಿ ಹಾಕಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗಿಸಿ ಉರಿದಿದೆ.
ಬೆಂಗಳೂರಿನ ಜೆಪಿ ನಗರದ ಶ್ರೀನಿಧಿ ಲೇಔಟ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮರ ಇದ್ದಿದ್ದರಿಂದ ಹೊತ್ತಿ ಬೆಂಕಿ ಉರಿದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.








