ಉಯ್ತರಕನ್ನಡ : ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದಾಪುರ ಪೊಲೀಸರ ವೈಫಲ್ಯ ಎಂದು ಸ್ಥಳೀಯರು ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ. ಎಸ್ ಪಿ ದೀಪನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಎಸ್ ಐ ಗಣಪತಿ ಭಟ್ ಮತ್ತು ಹೆಡ್ ಕಾನ್ಸ್ಟೇಬಲ್ ಆದಂತಹ ಚಂದ್ರಶೇಖರ್ ರನ್ನು ವರ್ಗಾವಣೆ ಮಾಡಲಾಗಿದೆ. ಇಬ್ಬರನ್ನು ಹಳಿಯಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಏನಾದರೂ ಲೋಪ ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ತಿಳಿಸಿದ್ದಾರೆ.








