ಬೆಳಗಾವಿ : ರಾಜ್ಯದ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತು ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇದುವರೆಗೂ ಫಲಾನುಭವಿಗಳಿಗೆ 26 ಕಂಚಿನ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಗಳ ಮರಣ ಹೋಮ ವಿಚಾರವಾಗಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಪ್ರಧಾನಮಂತ್ರಿಗಳ ಯೋಜನೆಯಲ್ಲಿ 600 ಎಕರೆ ಗುರುತಿಸಿದ್ದಾರೆ. ಜಾಗವನ್ನು ಕೊಟ್ಟಿರುವುದು ನನಗೆ ಗೊತ್ತಿರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಬಂದಾಗ ನಾನು ಜಿಲ್ಲಾಧಿಕಾರಿಗಳ ಜೊತೆಗೆ ಮಾತನಾಡಿದೆ.ಎಫ್ಐಆರ್ ನಲ್ಲಿ 8 ಶ್ರೀ ಗಂಧದ ಮರಗಳು ಇವೆ ಎಂದು ಉಲ್ಲೇಖಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.








