ಬೆಂಗಳೂರು : ಕಳೆದ ವಾರವಷ್ಟೇ ಬೆಂಗಳೂರಿನ ತಲಕಟ್ಟಪುರದಲ್ಲಿ ಜಲಮಂಡಳಿ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ 9ನೇ ತರಗತಿ ವಿದ್ಯಾರ್ಥಿ ಸಂಪ್ ಗೆ ಬಿದ್ದು ಸಾವನ್ನಪ್ಪಿದ್ದ. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಲ್ಲಿ ಘೋರ ದುರಂತವೊಂದು ತಪ್ಪಿದ್ದು, GBA ನಿರ್ಲಕ್ಷಕ್ಕೆ ವಿದ್ಯಾರ್ಥಿಯೊಬ್ಬ ಚರಂಡಿಗೆ ಬಿದ್ದಿದ್ದಾನೆ. ತಕ್ಷಣ ಸಾರ್ವಜನಿಕರು ಆತನನ್ನು ಮೇಲಕ್ಕೆ ಎತ್ತಿ ರಕ್ಷಿಸಿದ್ದಾರೆ.
ಬೆಂಗಳೂರಿನ ಸರ್ವಜ್ಞ ನಗರದ ಗೋವಿಂದಾಪುರದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಎದುರು GBA ಚರಂಡಿ ಕಾಮಗಾರಿ ನಡೆಸುತ್ತಿತ್ತು. ಆದರೆ ಚರಂಡಿ ಓಪನ್ ಇದ್ರೂ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಚರಂಡಿಗೆ 1ನೇ ತರಗತಿ ವಿದ್ಯಾರ್ಥಿ ಬಿದ್ದಿದ್ದಾನೆ. ಸ್ಲ್ಯಾಬ್ ಓಪನ್ ಇದ್ದ ಕಾರಣ ಬಾಲಕ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆತನನ್ನು ಮೇಲಕ್ಕೆ ಎತ್ತಿದ್ದಾರೆ.








