ಚಿಕ್ಕಮಗಳೂರು : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೋಣಿ ಗಂಡಿ ಬಳಿಯ ಹೇಮಾವತಿ ನದಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಸಂತೋಷ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಸಂಬಂಧಿಕರ ಜೊತೆಗೆ ಬಟ್ಟೆ ತೊಳೆಯಲು ಹೇಮಾವತಿ ನದಿಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತ ಸಂತೋಷ್ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಸಂತೋಷ ಲೈನ್ ಮೆನ್ ಆಗಿದ್ದರು.
ಕಳೆದ ನಾಲ್ಕು ದಿನಗಳ ಹಿಂದೆ ಎಷ್ಟೇ ಸಂತೋಷ ಲೈನ್ ಮ್ಯಾನ್ ಕೆಲಸವನ್ನು ಬಿಟ್ಟಿದ್ದರು. ಪತ್ನಿಯ ಜೊತೆಗೆ ಸಂಬಂಧಿಕರ ಮನೆಗೆ ಬಂದಾಗ ಈ ಘಟನೆ ಸಂಭವಿಸಿದೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮೆಸ್ಕಾಂ ಇಲಾಖೆಯ ಅನಿಲಕ್ಷಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೇಮಾವತಿ ನದಿಗೆ ಅಡಲಾಗಿ ಬಿದ್ದಿದ್ದ ಈ ಒಂದು ವಿದ್ಯುತ್ ತಂತಿಯಿಂದ ಸಂತೋಷ ಸಾವನಪ್ಪಿದ್ದಾರೆ.








