ಚಿಕ್ಕಬಳ್ಳಾಪುರ : ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆ ಎಲ್ಲೆಡೆ ಆಚರಿಸಲಾಗುತ್ತದೆ. ಆದರೆ ಪ್ರೇಮಿಗಳಿಗೆ ಶಾಕ್ ಎದುರಾಗಿದ್ದು, ಫೆಬ್ರವರಿ 14ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಬಂದ್ ಇರಲಿದೆ.
ಹೌದು ಫೆಬ್ರುವರಿ 14ರಂದು ಪ್ರೇಮಿಗಳ ದಿನಾಚರಣೆ ಹಿನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಂದಿ ಗಿರಿಧಾಮ ಬಂದಿರಲಿದೆ , ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ ಪ್ರಭು ಆದೇಶ ಹೊರಡಿಸಿದ್ದಾರೆ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ.








