ಬೆಂಗಳೂರು: ರಾಜ್ಯ ಸರ್ಕಾರದಿಂದ 54 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿದೆ. ಆ ಮೂಲಕ ನಿಗಮ-ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್ ನೀಡಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿರುವುದಾಗಿ ತಿಳಿಸಿದೆ.
ಯಾರಿಗೆಲ್ಲ ರಾಜ್ಯ ಸಚಿವರ ಸ್ಥಾನಮಾನ? ಇಲ್ಲಿದೆ ಲೀಸ್ಟ್
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದಂತ ಎನ್.ರಂಗಸ್ವಾಮಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್, ರಾಜ್ಯ ತಜ್ಞರ ಮೌಲ್ಯ ಮಾಪನ ಸಮಿತಿಯ ಅಧ್ಯಕ್ಷ ಮಹೇಶ್.ಎಂ.ಎನ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್.ಎಂ, ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಮತ್ತು ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೃಷ್ಣ ಸೈಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಿ ನಾಗೇಂದ್ರ ಕುಮಾರ್ ಸೇರಿದಂತೆ 54 ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು











