ಕೊಡಗು : ಕೊಡಗು ಜಿಲ್ಲೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಮಜೀದ್ ಹೋಗುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಕೊಡಗು ಜಿಲ್ಲೆ ಕುಶಾಲ್ ನಗರ ತಾಲೂಕಿನ ಆನೆಕಾಡು ಬಳಿ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರಿನಿಂದ ಇಳಿದು ಅಬ್ದುಲ್ ಮಜೀದ್, ಚಾಲಕ ಪಾರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.








