ತುಮಕೂರು : ತುಮಕೂರಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವೇಸ್ಟೇಜ್ ರಿಸೈಕ್ಲಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಫ್ಯಾಕ್ಟರಿಯಲ್ಲಿ ಸಂಗ್ರಹಿಸಿ ಇಟ್ಟಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅವಗಡದಲ್ಲಿ ಯಾವುದೇ ರೀತಿಯ ಸಾವು ನೋವು ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು, ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.








