ಮುಂಬೈ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತರತ್ನ ಕೊಟ್ಟರೆ ಪ್ರಶಸ್ತಿಯ ಘನತೆ ಹೆಚ್ಚುತ್ತದೆ. ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಕೊಡಬೇಕು. ಅದರಿಂದಪ್ರಶಸ್ತಿಯಘನತೆ ಹೆಚ್ಚುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಹೇಳಿದ್ದಾರೆ.
ನಿನ್ನೆ ಮುಂಬೈನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆರ್‌ಎಸ್‌ಎಸ್‌ಗೆ ಅಚ್ಛೇ ದಿನ್ ಬಂದಿದೆಯೇ ಎಂದು ಸಭಿಕರೊಬ್ಬರು ಕೇಳಿದ ಪ್ರಶ್ನೆಗೆ, ಅದು ಇನ್ನೊಂದು ಮಾರ್ಗ. ಸಂಘವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬದ್ಧವಾಗಿತ್ತು. ಅದನ್ನು ಬೆಂಬಲಿಸಿದವರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.
ಇಸ್ಲಾಂ ಅನ್ನು ಶಾಂತಿಯ ಧರ್ಮ ಎಂದು ಕರೆಯಲಾಗುತ್ತದೆ, ಆದರೆ ಶಾಂತಿ ಕಾಣುವುದಿಲ್ಲ. ಧರ್ಮದಲ್ಲಿ ಆಧ್ಯಾತ್ಮಿಕತೆ ಇಲ್ಲದಿದ್ದರೆ, ಅದು ದಬ್ಬಾಳಿಕೆ ಮತ್ತು ಆಕ್ರಮಣಕಾರಿಯಾಗುತ್ತದೆ. ಇಂದು ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮದಲ್ಲಿ ಏಸುಕ್ರಿಸ್ತ ಮತ್ತು ಪ್ರವಾದಿ ಮುಹಮ್ಮದ್ ಅವರ ಬೋಧನೆಗಳು ಕಂಡುಬರುತ್ತಿಲ್ಲ. ನಮಗೆ ನಿಜವಾದ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದ ಆಚರಣೆ ಬೇಕು ಎಂದು ಹೇಳಿದರು








