ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಮೈಸೂರು ಹೊರವಲಯದ ಕೆಸರೆ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಮೈಸೂರು ಬೆಂಗಳೂರು ಹೈವೇ ಬಳಿಯ ನಾಲ್ಕು ಗೋದಾಮುಗಳು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ಹಳೆಯ ವಸ್ತುಗಳನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬೆಂಕಿ ಶಂಕೆ ವ್ಯಕ್ತವಾಗಿದೆ. ಎನ್ ಆರ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








