ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ, ಫೆಬ್ರವರಿ 08, 2026 ರಂದು, ಚುನಾವಣೆಯಲ್ಲಿ ಹೆಗ್ಗುರುತು ಗೆಲುವು ಸಾಧಿಸಿದ ಜಪಾನ್ ಪ್ರಧಾನಿ ಸನೆ ತಕೈಚಿ ಅವರನ್ನು ಅಭಿನಂದಿಸಿದರು.
ಭಾರತ-ಜಪಾನ್ ಸ್ನೇಹವು ಹೆಚ್ಚಿನ ಎತ್ತರವನ್ನು ತಲುಪುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಹೇಳಿದ್ದೇನು?
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: “ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಚುನಾವಣೆಯಲ್ಲಿ ನಿಮ್ಮ ಐತಿಹಾಸಿಕ ಗೆಲುವಿಗಾಗಿ ಸನಾಯೆ ತಕೈಚಿ ಅವರಿಗೆ ಅಭಿನಂದನೆಗಳು! ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು ಪ್ರಮುಖ ಪಾತ್ರ ವಹಿಸುತ್ತದೆ. ನಿಮ್ಮ ಸಮರ್ಥ ನಾಯಕತ್ವದಲ್ಲಿ ನಾವು ಭಾರತ-ಜಪಾನ್ ಸ್ನೇಹವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದನ್ನು ಮುಂದುವರಿಸುತ್ತೇವೆ ಎಂಬ ವಿಶ್ವಾಸ ನನಗಿದೆ.” ಎಂದಿದ್ದಾರೆ.








