ಬೀದರ್ : ನಿನ್ನೆ ರಾತ್ರಿ ಬೀದರ್ ನಲ್ಲಿ ಭೀಕರ ಅಪಘಾತವಾಗಿದ್ದು, ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮಗ ಗಂಭೀರ ಗಾಯಗೊಂಡ ದಾರುಣ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್(ಬಿ) ಪಟ್ಟಣದ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ವೆಂಕಟ್ ರಾಮರಾವ (40), ಅವರ ಪತ್ನಿ ಶಿಲ್ಪಾ (35) ಹಾಗೂ ಮಗಳು ರಕ್ಷಿತಾ (11) ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಗ ರತ್ನಜೀತ (15) ನಿಗೆ ಗಂಭೀರ ಗಾಯಗಳಾಗಿವೆ. ಆತನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.







