ಮೈಸೂರು : ಕಾರ್ ರೇಸ್ ನಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಆಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಎಂಬಲ್ಲಿ ನಡೆದಿದೆ. ಹುಳಿಮಾವು ಸಮೀಪದ ಫಿಲ್ಮಿ ಸಿಟಿ ಬಳಿ ಆಯೋಜಿಸಿದ ಕಾರು ರೇಸ್ ನಲ್ಲಿ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ.
ಖಾಸಗಿ ಸಂಸ್ಥೆಯೊಂದು ಕಾರು ರೇಸ್ ಆಯೋಜನೆ ಮಾಡಿತ್ತು. ರೇಸ್ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಪ್ರಜ್ವಲ್ ಕೈಗೆ ಗಂಭೀರವಾದ ಗಾಯವಾಗಿದೆ. ಇನ್ನು ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








