ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರಿನ ಅರವಿ ರೋಡ್ ಮೆಟ್ರೋಲ್ ನಿಲ್ದಾಣದ ಬಳಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾಲಿ ಟ್ರಂಕ್ ಸರ್ಕಾರ ಎಂದು ವಿನೂತನ ಪ್ರತಿಭಟನೆ ಮಾಡಿದರು.
ಹೌದು ಖಾಲಿ ಟ್ರಂಕ್ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಟ್ರಂಕ್ ಮೇಲೆ ಪೋಸ್ಟರ್ ಅಂಟಿಸಿದ್ದಾರೆ ಖಾಲಿ ಟ್ರಂಕ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಹಾಕಿ ಪ್ರದರ್ಶಿಸಿದರು. ಬೆಂಗಳೂರಿನ ಆರ್ ವಿ ರೋಡ್ ಮೆಟ್ರೋನ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಆರ್ ವಿ ರೋಡ್ ಮೆಟ್ರೋ ನಿಲ್ದಾಣದ ಬಳಿ ಹೈಡ್ರಾಮಾ ನಡೆಸಿದ್ದು ತೇಜಸ್ವಿ ಸೂರ್ಯನನ್ನು ವಶಕ್ಕೆ ಪಡೆದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
ಪೊಲೀಸರ ಜೊತೆಗೆ ಸಂಸದ ತೇಜಸ್ವಿ ಸೂರ್ಯ ವಾಗ್ವಾದ ನಡೆಸಿದ್ದಾರೆ. ಏಕೆಂದರೆ ಆರ್ ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆಗೆ ಅನುಮತಿಯನ್ನು ನಿರಾಕರಿಸಿ ಸಂಸದ ತೇಜಸ್ವಿ ಸೂರ್ಯಗೆ ಪೊಲೀಸರು ನೋಟಿಸ್ ನೀಡಿದ್ದರು. ಆದರೂ ಕೂಡ ಇದೀಗ ಟ್ರಂಕ್ ತೆಗೆದುಕೊಂಡು ಬಂದು ಪ್ರತಿಭಟನೆ ನಡೆಸಿದರು ಹಾಗಾಗಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.








