ಮಂಡ್ಯ : ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಈ ಒಂದು ಘಟನೆ ನಡೆದಿದ್ದು ನೇಣು ಬಿಗಿದುಕೊಂಡು ಶಂಕುತಲಾದೇವಿ (46) ಪ್ರಿಯಾಂಕ (19) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಿಯಾಂಕಾಳ ಮದುವೆಗೆ ಕುಟುಂಬದ ಸದಸ್ಯರು ಸಿದ್ಧತೆ ನಡೆಸಿದರು ಮದುವೆ ಸಿದ್ಧತೆ ನಡುವೆ ತಾಯಿ ಮತ್ತು ಮಗಳು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.








