ಬೆಂಗಳೂರು : ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಕುಸಿದು ಬಿದ್ದು ಜ್ಯೋತಿ (45) ಸಾವನ್ನಪ್ಪಿದ್ದರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








