ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ RCB ಮ್ಯಾಚ್ ನಡೆಸುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಕೆ ಎಸ್ ಎಸ್ ಸಿ ಎ ನಿಯೋಗ ಮತ್ತು ಆರ್ಸಿಬಿ ನಿಯೋಗ ಭೇಟಿ ಮಾಡಿದೆ.
ಕೆಎಸ್ಸಿ ಅಧ್ಯಕ್ಷ ವೆಂಕಟೇಶ ಪ್ರಸಾದ್ ಆರ್ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ಮ್ಯಾಚ್ ನಡೆಸುವ ವಿಚಾರವಾಗಿ ಚರ್ಚಿಸಿದ್ದಾರೆ. ಇದೆ 12 rNdu ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತೆ. ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.








