ಮಂಡ್ಯ: ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಂಡ್ಯ ಜಿಲ್ಲೆಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಹಾಗೂ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಕುಂತಲಾದೇವಿ (46) ಹಾಗೂ ಪ್ರಿಯಾಂಕಾ (19) ಮೃತ ದುರ್ದೈವಿಗಳು.
ಮಗಳು ಪ್ರಿಯಾಂಕಾ ಮದುವೆಗೆ ಕುಟುಂಬದವರು ಸಿದ್ಧತೆ ನಡೆಸಿದ್ದರು. ಆದರೆ ಈಗ ತಾಯಿ-ಮಗಳು ಇಬ್ಬರೇ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








