ಬೆಂಗಳೂರು: ಆರ್ಮಿ ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆಯಲ್ಲಿ ಕಳ್ಳಾಟ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ಬೆಂಗಳೂರಲ್ಲಿ ಆರ್ಮಿ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆ ವೇಳೆ ಕಳ್ಳಾಟ ಆರೋಪ ಕೇಳಿ ಬಂದಿತ್ತು. ಹೀಗಾಗಿ 18 ಪರೀಕ್ಷಾರ್ಥಿಗಳನ್ನು ಬೆಂಗಳೂರಿನ ಹಲಸೂರು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಿನ್ನೆ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆದಿತ್ತು. ಈ ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆಯಲ್ಲಿ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ನಕಲು ಮಾಡಿದಂತ ಆರೋಪ ಕೇಳಿ ಬಂದಿತ್ತು. ಮೂರು ಮೊಬೈಲ್ ಹಾಗೂ ಎಲೆಕ್ಟ್ರಿಕ್ ಡಿವೈಸ್ ಗಳನ್ನು ಜಪ್ತಿ ಮಾಡಲಾಗಿತ್ತು. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು








