Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM

SHOCKING : ಪೋಷಕರೇ ಎಚ್ಚರ : `ಹೇನು ಸೋಂಕಿ’ಗೆ 12 ವರ್ಷದ ಬಾಲಕಿ ದುರಂತ ಸಾವು.!

10/02/2026 9:33 AM

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ
KARNATAKA

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

By kannadanewsnow5710/02/2026 9:31 AM

ದಾವಣಗೆರೆ : ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆಯೋಜಿಸಿದ್ದ “ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ-2026 ಮತ್ತು ಜನ ಜಾಗೃತಿ ಜಾಥಾ ಮಹೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ಸಮುದಾಯವಷ್ಟೇ ಅಲ್ಲದೇ, ಎಲ್ಲ ಶೋಷಿತ ಸಮಾಜಗಳೂ ತಮ್ಮ ಇತಿಹಾಸ ಮರೆಯಬಾರದು. ಈ ದಿಸೆಯಲ್ಲಿ ಇಂದಿನ ಜಾತ್ರೆ ಅತ್ಯಂತ ಮಹತ್ವವಾಗಿದೆ. ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ. ಶಿಕ್ಷಣ, ಸಂಘಟನೆ ಹಾಗೂ ಹೋರಾಟಗಳಿಂದ ಮಾತ್ರ ಶೋಷಿತರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬಹುದು. ಮೌಢ್ಯ ಕಂದಾಚಾರಗಳಿಂದ ದೂರವಾಗಲು ಶಿಕ್ಷಣ ಅಗತ್ಯ. ಹಿಂದಿನಿಂದಲೂ ಶೋಷಿತ ಸಮುದಾಯ ಶಿಕ್ಷಣದಿಂದ ವಂಚಿತವಾಗಿತ್ತು. ಮಹರ್ಷಿ ವಾಲ್ಮೀಕಿಯವರು  ಶಿಕ್ಷಣ ಪಡೆದು ರಾಮಾಯಣದಂತಹ ಗ್ರಂಥವನ್ನು ರಚನೆ ಮಾಡಿದರು. ಮಹಾಭಾರತ ರಚಿಸಿದ ವ್ಯಾಸ ಮುನಿಗಳು ಬೆಸ್ತರ ಸಮುದಾಯಕ್ಕೆ ಸೇರಿದವರು.

ಚತುರ್ವರ್ಣ ವ್ಯವಸ್ಥೆಯಲ್ಲಿ ಶೂದ್ರರನ್ನು ಶಿಕ್ಷಣದಿಂದ ಹೊರಗಿಡಲಾಯಿತು. ಆದರೆ ಸಂವಿಧಾನ ಜಾರಿಗೆ ಬಂದ ನಂತರ ಸಮಾನ ಅವಕಾಶಗಳು ದೊರೆಯತೊಡಗಿತು. ಶೋಷಿತರು ಶಿಕ್ಷಣದಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಆದ್ದರಿಂದ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ತಳಸಮುದಾಯದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ತುಂಬಲಾಗುತ್ತಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದಂತೆ, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ನಿಜಾರ್ಥದಲ್ಲಿ ಸ್ವಾತಂತ್ರ್ಯ ದೊರೆತಂತಾಗುತ್ತದೆ. ಪಟ್ಟಭದ್ರ ಹಿತಾಸಕ್ತಿಗಳು ಜಾತಿವ್ಯವಸ್ಥೆಯನ್ನು ಹುಟ್ಟುಹಾಕಿದ್ದು, ಸಮಾಜದಲ್ಲಿ ಅಸಮಾನತೆಗೆ ಕಾರಣವಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಶಕ್ತಿಯಿಂದ ಮಾತ್ರ ಸಮಾಜದಲ್ಲಿನ ಅಸಮಾನತೆ ತೊಲಗಲು ಸಾಧ್ಯ. ತಮ್ಮ ಹಕ್ಕುಗಳ ಬಗ್ಗೆ ಜಾಗೃತಿಯಿದ್ದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ .ಬಸವಣ್ಣನವರು ಜಾತಿವರ್ಗಗಳ ವ್ಯವಸ್ಥೆ ನಿರ್ಮೂಲನೆಗೆ ಒತ್ತು ನೀಡಿದ್ದರು. ಆದರೆ ಇಂದಿಗೂ ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮಲ್ಲಿ ಪ್ರಚಲಿತವಾಗಿದೆ. ಪಟ್ಟಭದ್ರ ಹಿತಾಸಕ್ತಿಗಳು ಮೌಢ್ಯಗಳನ್ನು, ಕಂದಾಚಾರಗಳನ್ನು ಪ್ರೋತ್ಸಾಹಿಸಿದ್ದರು. ಈ ಪಿತೂರಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ.

ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯನ್ನು ಜಾರಿಗೆ ತಂದಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ದೊರೆಯಬೇಕೆಂದು 2013 ರಲ್ಲಿ ಜಾರಿಗೆ ತರಲಾಯಿತು. 2025-26 ಕ್ಕೆ ಈ ಯೋಜನೆಯಡಿ 42,018 ಕೋಟಿ ರೂ.ಗಳನ್ನು ನೀಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಈ ಅವಧಿಯಲ್ಲಿ 1.10 ಲಕ್ಷ ಕೋಟಿ ವೆಚ್ಚ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮೂರು ವರ್ಷದಲ್ಲಿ 1.17 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇಂತಹ ಜನಪರ ಕಾನೂನನ್ನು ಜಾರಿಗೆ ತಂದ ಕೇವಲ ಮೂರು ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬ ಹೆಮ್ಮೆ ನಮಗಿದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದಿಲ್ಲ. ಸುಪ್ರೀಂ ಕೋರ್ಟ್ನಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ಎತ್ತಿಹಿಡಿಯಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಹಾಗೂ ಸರ್ಕಾರಿ ನೌಕರರಿಗೆ ಪದೋನ್ನತಿಯಲ್ಲಿಯೂ ಮೀಸಲಾತಿಯನ್ನು ತರಲಾಯಿತು. ರಾಜ್ಯದಲ್ಲಿನ ಹಲವು ಮಠಗಳಿಗೆ ಸರ್ಕಾರ ಸುಮಾರು 50 ಎಕರೆ ಜಾಗವನ್ನು ನೀಡಿದ್ದು, ವಾಲ್ಮೀಕಿ ಮಠಕ್ಕೆ 4.18 ಎಕರೆ ಜಾಗವನ್ನು ನೀಡಿದೆ. ಶೋಷಿತ ಸಮುದಾಯಗಳ ಪರವಾಗಿ ಯಾವ ಸರ್ಕಾರವಿದೆ ಎಂಬ ಬಗ್ಗೆ ಜನರು ಚಿಂತನೆ ನಡೆಸಬೇಕು.

ಎಸ್ಸಿ ಎಸ್ಟಿ ಸಮುದಾಯವರು ರಾಜ್ಯದಲ್ಲಿ ಶೇ. 24.1ರಷ್ಟಿದ್ದು, ಈ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂದರೆ ನಮ್ಮ ಶಿಫಾರಸ್ಸಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇದನ್ನು 9ನೇ ಶೆಡ್ಯೂಲ್ಗೆ ಸೇರಿಸಬೇಕೆಂದು, ಈ ಮೀಸಲಾತಿಯನ್ನು ಜಾರಿಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ.

ಉದ್ಯೋಗ, ಶಿಕ್ಷಣ, ಆರ್ಥಿಕ ಸಾಮಾಜಿಕ ಸಮಾನತೆ ದೊರೆಯದ ಹೊರತು ಸಮಾನತೆ ಸ್ಥಾಪಿಸಲು ಸಾಧ್ಯವಿಲ್ಲ. ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಸಂವಿಧಾನ ವಿರೋಧಿಗಳು ಅಧಿಕಾರದಲ್ಲಿದ್ದರೆ, ಸಂವಿಧಾನದಲ್ಲಿರುವುದು ಜಾರಿಯಾಗುವುದಿಲ್ಲ ಎಂಬ ಸತ್ಯವನ್ನು ಎಲ್ಲರೂ ಅರಿಯಬೇಕಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ ಎಂದು ಹೇಳಿದ್ದಾರೆ.

ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುತ್ತೇನೆ.

ವಾಲ್ಮೀಕಿ ಸಮುದಾಯವಷ್ಟೇ ಅಲ್ಲದೇ, ಎಲ್ಲ ಶೋಷಿತ ಸಮಾಜಗಳೂ ತಮ್ಮ ಇತಿಹಾಸ ಮರೆಯಬಾರದು. ಈ ದಿಸೆಯಲ್ಲಿ ಇಂದಿನ ಜಾತ್ರೆ ಅತ್ಯಂತ ಮಹತ್ವವಾಗಿದೆ. ಇತಿಹಾಸ ತಿಳಿಯದಿದ್ದರೆ ಭವಿಷ್ಯ… pic.twitter.com/RVg5EW0QlI

— Siddaramaiah (@siddaramaiah) February 9, 2026

CM Siddaramaiah urges Centre to increase SC-ST reservation in line with population in the state
Share. Facebook Twitter LinkedIn WhatsApp Email

Related Posts

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM3 Mins Read

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

10/02/2026 9:27 AM2 Mins Read

BIG NEWS : `ಕಳಸಾ ಬಂಡೂರಿ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭ : CM ಸಿದ್ದರಾಮಯ್ಯ

10/02/2026 9:24 AM6 Mins Read
Recent News

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM

SHOCKING : ಪೋಷಕರೇ ಎಚ್ಚರ : `ಹೇನು ಸೋಂಕಿ’ಗೆ 12 ವರ್ಷದ ಬಾಲಕಿ ದುರಂತ ಸಾವು.!

10/02/2026 9:33 AM

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM

ಜೈಲಿನಲ್ಲಿ ಬರೆದ ‘ಪ್ರಬಂಧ’ಕ್ಕೆ ಒಲಿದ ನ್ಯಾಯ: ಪೋಕ್ಸೊ ಅಪರಾಧಿಯ ಜೀವಾವಧಿ ಶಿಕ್ಷೆ ಕಡಿತ!

10/02/2026 9:29 AM
State News
KARNATAKA

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

By kannadanewsnow5710/02/2026 9:43 AM KARNATAKA 3 Mins Read

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಸೂಪರ್ ಹಿಟ್’. ತನ್ನ…

ರಾಜ್ಯದಲ್ಲಿ ಜನಸಂಖ್ಯೆಯ ಅನುಗುಣವಾಗಿ `SC-ST’ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರಕ್ಕೆ ಒತ್ತಾಯ : CM ಸಿದ್ದರಾಮಯ್ಯ

10/02/2026 9:31 AM

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

10/02/2026 9:27 AM

BIG NEWS : `ಕಳಸಾ ಬಂಡೂರಿ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭ : CM ಸಿದ್ದರಾಮಯ್ಯ

10/02/2026 9:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.