ಬೆಂಗಳೂರು : ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ 7ರಿಂ 8 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ ಒಟ್ಟು 7-8 ಸಾವಿರ ಶಿಕ್ಷಕರ ನೇಮಕಾತಿ ಆಗುತ್ತದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಯ ದಾಖಲಾತಿ ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುವುದು. ಸರ್ಕಾರಿ ಶಾಲೆಗಳಲ್ಲೂ ಸಹ ಉತ್ತಮ ಫಲಿತಾಂಶ ಬರಬೇಕು. ಕೆಪಿಎಸ್ ಶಾಲೆಗಳ ಬಗ್ಗೆ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಕೆಪಿಎಸ್ ಶಾಲೆಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.








