ಮೈಸೂರು : ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತದಿಂದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ. 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.
ಈ ಒಂದು ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸೈಡ್ ಪಡೆದಿರುವ ಇತರರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ತನಿಖೆ ಮುಂದುವರಿಸಿರುವ ಲೋಕಾಯುಕ್ತ ಎಸ್ ಪಿ ಉದೇಶ ಅವರು ಪ್ರತಿ ಕೇಸ್ ಸಂಬಂಧ 40ಕ್ಕೂ ಹೆಚ್ಚು ಮಂದಿಗೆ ನೋಟಿಸ್ ನೀಡಿದ್ದಾರೆ.
ಅಂದಿನ ಮೂಡ ಆಯುಕ್ತರ ತಂತ್ರ ನಟೇಶ್ ಹಾಗೂ ದಿನೇಶ್ ಅವಧಿಯಲ್ಲಿ 50:50 ಅನುಪಾತದಲ್ಲಿ 1050 ಸೈಟ್ ಹಂಚಿಕೆಯಾಗಿದ್ದು, ಸಂಬಂಧ ಪಟ್ಟಂತೆ 134 ಪ್ರಕರಣ ದಾಖಲಾಗಿದ್ದು ಪ್ರತಿ ಪ್ರಕರಣದ ಈಗಾಗಲೇ ಹಲವರಿಗೆ ನೋಟಿಸ್ ನೀಡಲಾಗಿದೆ ಹಾಗಾಗಿ 50 ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆ ಮುಂದುವರೆಸಿದೆ.








