ಕೋಲಾರ : ಕೋಲಾರದಲ್ಲಿ ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಂಧ್ರಪ್ರದೇಶ ಮೂಲದ ರೌಡಿಶೀಟರ್ ನನ್ನ ಕೊಚ್ಚಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಳ್ಳಿ ಬಳಿ ಈ ಒಂದು ಬರ್ಬರ ಕೊಲೆ ನಡೆದಿದೆ.
ರೌಡಿಶೀಟರ್ ಆದ ಭಾಸ್ಕರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೌಡಿಶೀಟರ್ ಭಾಸ್ಕರ್ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಆಂಧ್ರಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಭಾಸ್ಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಸ್ಥಳಕ್ಕೆ ನಂಗಲಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








