ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪ ಆಗಿರುವ ಅನುಭವ ಆಗಿದ್ದು ಬೆಳಗ್ಗೆ 11: 43 ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ.
ದುರಾದ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಆಗಿದೆ ವಿಜಯಪುರ ಹಾಗೂ ಸುತ್ತಮುತ್ತಲೂ ಕೂಡ ಭೂಮಿಕಂಪಿಸಿದ ಅನುಭವ ಆಗಿದ್ದು, ಆದರ್ಶ ನಗರ ಭೂತನಾಳ ಪಾನಿ ನಗರ ಮತ್ತು ಇತರೆ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರು ಬೆಚ್ಚಿಬಿದ್ದಿದ್ದಾರೆ.








