ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮದ್ದೂರು ತಾಲೂಕು ಘಟಕಕ್ಕೆ ಮಂಗಳವಾರ ಚುನಾವಣೆ ಜರುಗಿದ್ದು, ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಶಿವನಂಜಯ್ಯ ಅವಿರೋಧವಾಗಿ ಆಯ್ಕೆಯಾದರು.
ಪದಾಧಿಕಾರಿಗಳ ಆಯ್ಕೆಗೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ವಿವಿಧ ಸ್ಥಾನಗಳಿಗೆ ಪ್ರತಿಸ್ಪರ್ಧಿಯಾಗಿ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಶಿವನಂಜಪ್ಪ, ಉಪಾಧ್ಯಕ್ಷರಾಗಿ ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಚಕ್ರಪಾಣಿ, ಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ನಂದೀಶ್ ಅವರುಗಳು ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಂ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಇದೀಗ ಆಯ್ಕೆಯಾದವರು ಸಂಘದ ಎಲ್ಲಾ ಸದಸ್ಯರನ್ನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕು. ಚುನಾವಣೆಯೇ ನಮ್ಮ ಧ್ಯೇಯವಲ್ಲ, ಅದು ನೆಪ ಮಾತ್ರ ಆದರೆ ಅದನ್ನೇ ಯಾರೂ ಮನದಲ್ಲಿಟ್ಟುಕೊಳ್ಳಬಾರದು ಎಂದು ಸಲಹೆ ನೀಡಿದರು.
ಚುನಾವಣಾಧಿಕಾರಿಯಾಗಿ ಜಿಲ್ಲಾ ಉಪಾಧ್ಯಕ್ಷ ಚಿನಕುರಳಿ ಲೋಕೇಶ್ ಕಾರ್ಯನಿರ್ವಹಿಸಿದರು.
ಇದೇ ವೇಳೆ ರಾಜ್ಯ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ್, ರವಿ ಸಾವಂಧಿಪುರ, ನಾಗಮಂಗಲ ಮಂಜುನಾಥ್, ಪುಟ್ಟಸ್ವಾಮಿ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಾಪಾರಿ ಬರ್ಬರ ಹತ್ಯೆ








