ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯೂಡಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 1 ಲಕ್ಷ ಲಂಚ ಪಡೆಯುತ್ತಿದ್ದ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೂವಿನಹಡಗಲಿಯ ನಿವಾಸಿ ಮಹೇಶ್ ಹಲಗೇರಿ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಮಗಾರಿ ಬಿಲ್ ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಮಾಜ ಲೋಕಾಯುಕ್ತ ಪೊಲೀಸರಿಗೆ ಮಹೇಶ್ ದೂರು ನೀಡಿದ್ದ. ಲಂಚ ಪಡೆಯುತ್ತಿದ್ದ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಈ ವೇಳೆ ದಾಳಿ ನಡೆಸಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.








