ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಭಾರಿ ಚರ್ಚೆ ನಡೆಯುತ್ತಿದ್ದು ಅದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ನ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ಭರವಸೆ ಇದೆ ಸಿಎಂ ಅವರು ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ ಎಂದು ಡಿಕೆ ಸುರೇಶ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಯಾರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಅವರನ್ನೇ ಕೇಳಬೇಕು ಡಿಕೆ ಶಿವಕುಮಾರ್ ವಿದೇಶಿ ಪ್ರವಾಸ ಆಯೋಜನೆ ಮಾಡಿದ್ದಲ್ಲ ವಿದೇಶ ಪ್ರವಾಸಕ್ಕೂ ಡಿಕೆ ಶಿವಕುಮಾರ್ ಗು ಯಾವುದೇ ಸಂಬಂಧವಿಲ್ಲ ಅದನ್ನು ಮಾತ್ರ ಸ್ಪಷ್ಟವಾಗಿ ಹೇಳಬಲ್ಲೆ ಈ ಬಗ್ಗೆ ವಿದೇಶ ಪ್ರವಾಸದ ಆಯೋಜಕರು ಕೇಳಿ ಎಂದು ಡಿಕೆ ಸುರೇಶ್ ತಿಳಿಸಿದರು.








