Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ತೀವ್ರ ಆಘಾತ’: ಕೆನಡಾ ಶಾಲೆಯಲ್ಲಿ ಭೀಕರ ಗುಂಡಿನ ದಾಳಿಗೆ 10 ಮಂದಿ ಬಲಿ, ಪ್ರಧಾನಿ ಮೋದಿ ಸಂತಾಪ

11/02/2026 3:46 PM

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

11/02/2026 3:46 PM

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್
KARNATAKA

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

By kannadanewsnow0911/02/2026 3:42 PM

ಬೆಂಗಳೂರು: “ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಸರ್ವ ಪಕ್ಷಗಳ ನಾಯಕರನ್ನು ಒಳಗೊಂಡಿದೆ. ಇಲ್ಲಿ ಬಿಜೆಪಿ, ಜನತಾ ದಳ, ಬಿಎಸ್ ಪಿ ಸೇರಿದಂತೆ ಎಲ್ಲರೂ ಇದ್ದಾರೆ. ನಮ್ಮಲ್ಲಿ ಮೊದಲ ಆದ್ಯತೆ ಅವರಿಗೆ. ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ, ಆಮೇಲೆ ಕಾಂಗ್ರಸಿಗರಿಗೆ ಆದ್ಯತೆ. ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಪಕ್ಷದ ಗುರಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಉತ್ತರಿಸಿದರು.

ರಾಜ್ಯ ಸರ್ಕಾರ ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನಮಾನ ನೀಡಿದೆ ಎಂದು ಕೇಳಿದಾಗ, “ಕಾಂಗ್ರೆಸ್ ಎಲ್ಲರನ್ನು ಗೌರವಿಸುತ್ತದೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂಬ ಭಾವನೆ ಮುಖ್ಯಮಂತ್ರಿಗಳಿಗೆ ಇರುವುದರಿಂದ ಮಾಡಿರಬಹುದು. ಇದರಲ್ಲಿ ತಪ್ಪೇನಿಲ್ಲ” ಎಂದರು.

ದೆಹಲಿ ಪ್ರವಾಸ ಶಿವಕುಮಾರ್ ಅವರಿಗೆ ಹೊಸತಲ್ಲ

ನಿಮ್ಮ ಸಹೋದರ ಅವರು ದೆಹಲಿಯಲ್ಲಿದ್ದಾರೆ ಎಂದು ಕೇಳಿದಾಗ, “ಅವರು ದೆಹಲಿ ಪ್ರವಾಸಕ್ಕೆ ಹೋಗುವಾಗ ಚುನಾವಣೆ ವಿಚಾರವಾಗಿ ಸಭೆ ಮಾಡಲು ಕರೆದಿದ್ದಾರೆ ಎಂದು ನಿಮಗೆ ಮಾಹಿತಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆದಾಗ ಮಾತ್ರ ದೆಹಲಿಗೆ ಹೋಗುತ್ತಿಲ್ಲ. ಕಳೆದ 40 ವರ್ಷಗಳಿಂದ ನಿರಂತರವಾಗಿ ದೆಹಲಿಗೆ ಹೋಗುತ್ತಿದ್ದಾರೆ. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಹೋಗುತ್ತಾರೆ. ಈಗ ಅವರು ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಸರ್ಕಾರದ ಕೆಲಸಗಳು ಇರುತ್ತವೆ. ಇನ್ನು ದೆಹಲಿಗೆ ಹೋದಾಗ, ರಾಜಕೀಯವಾಗಿ ಅಲ್ಲದಿದ್ದರೂ ಕುಶಲೋಪರಿ ಚರ್ಚೆಗೆ ಭೇಟಿ ಮಾಡುತ್ತಾರೆ. ಸಂಸತ್ ಅಧಿವೇಶನ ನಡೆಯುತ್ತಿರುವಾಗ ಇಲಾಖೆಗಳಿಗೆ ಸಂಬಂಧಿಸಿದ ಚರ್ಚೆ ಮಾಡಲು ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ, ಬೆಂಗಳೂರಿನ ವಿಚಾರವಾಗಿ ಚರ್ಚೆ ಮಾಡುತ್ತಾರೆ. ಹೀಗಾಗಿ ದೆಹಲಿ ಪ್ರವಾಸ ಶಿವಕುಮಾರ್ ಅವರಿಗೆ ಹೊಸತಲ್ಲ” ಎಂದು ತಿಳಿಸಿದರು.

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ

ಯತೀಂದ್ರ ಸಿದ್ದಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ” ಎಂದು ತಿಳಿಸಿದರು.

ನಮಗೆ ಸಿಗುವ ನೋಟೀಸ್ ಯತೀಂದ್ರ ಅವರಿಗೆ ಏಕಿಲ್ಲ ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರಿಗೂ ಒಂದೇ ನೀತಿ ಇರಬೇಕು. ಅವರೇ ಹೈಕಮಾಂಡ್ ಆಗಿರುವುದರಿಂದ ಏನೂ ಸಮಸ್ಯೆ ಇಲ್ಲ” ಎಂದರು.

ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ:

ಕೆಎಂಎಫ್ ಚುನಾವಣೆಯಲ್ಲಿ ನಿಮ್ಮ ಜೊತೆಗೆ ಇನ್ನಿಬ್ಬರು ಶಾಸಕರು ಸ್ಪರ್ಧಿಸಲು ಆಕಾಂಕ್ಷಿಗಳಿದ್ದಾರೆ ಎಂದು ಕೇಳಿದಾಗ, “ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಹಾಗೂ ಸರ್ಕಾರದ ತೀರ್ಮಾನದಂತೆ ಆಗುತ್ತದೆ. ಇದರಲ್ಲಿ ಲಾಭಿ ಮಾಡಿ ಗಿಟ್ಟಿಸಿಕೊಳ್ಳುವಂತಹದ್ದು ಏನೂ ಇಲ್ಲ. ಇದು ರಾಜ್ಯದ ರೈತರ ಜವಾಬ್ದಾರಿಯುತ ಸಂಸ್ಥೆ. ರೈತರ ಹಿತ ಕಾಯುವುದು ಮುಖ್ಯ. ಅದನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಹಾಗೂ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧ. ನಾನು ಯಾರಿಗೂ ಈ ಜವಾಬ್ದಾರಿ ಬೇಕು ಎಂದು ಕೇಳುವುದಿಲ್ಲ, ಅದರ ಅಗತ್ಯವಿಲ್ಲ. ಸಂಸದನಾಗಿ ನಾನು ಕೆಲಸ ಮಾಡಿದ್ದೇನೆ, ನನಗೆ ನನ್ನದೇ ಆದ ಜವಾಬ್ದಾರಿ ಇತಿ ಮಿತಿಗಳಿವೆ. ನಾನು ಯಾವುದನ್ನು ಆಸೆಪಟ್ಟು ಕೇಳುವುದಿಲ್ಲ, ಅದರ ಹಿಂದೆ ಹೋಗುವವನೂ ಅಲ್ಲ” ಎಂದರು.

ನಿಮಗೆ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೀರಾ, ಆಸೆ, ಆಕಾಂಕ್ಷೆ ಇದೆಯೇ ಎಂದು ಕೇಳಿದಾಗ, “ನನಗೆ ಯಾವ ಆಸೆ, ಆಕಾಂಕ್ಷೆ ಇಲ್ಲ. ಇರುವ ಜವಾಬ್ದಾರಿ ನಿಭಾಯಿಸುವುದೇ ಕಷ್ಟ. ನನಗೆ ಈಗಾಗಲೇ ಅನೇಕ ಜವಾಬ್ದಾರಿಗಳಿವೆ. ನನಗೆ ವಿಶ್ರಾಂತಿ ಬೇಕು ಎಂದು ಕೇಳಿದವನು ನಾನು. ಜವಾಬ್ದಾರಿ ಬಂದಾಗ ಅದನ್ನು ನಿಭಾಯಿಸುವ ದೃಷ್ಟಿಕೋನ ಬಹಳ ಮುಖ್ಯ. ರೈತರ ಹಿತ, ನಂದಿನ ಬ್ರ್ಯಾಂಡ್ ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವುದು ಬಹಳ ಮುಖ್ಯ. ಯಾವುದೋ ಖುಷಿಗಾಗಿ ಹೋಗಿ ಕೂರುವ ಸ್ಥಾನ ಅದಲ್ಲ” ಎಂದು ತಿಳಿಸಿದರು.

ದೆಹಲಿ ಪ್ರಯಾಣದ ಬಗ್ಗೆ ಕೇಳಿದಾಗ, “ದೆಹಲಿಯಲ್ಲಿ ಡೈರಿಗೆ ಸಂಬಂಧಿಸಿದಂತೆ ವಸ್ತುಪ್ರದರ್ಶನ ನಡೆಯುತ್ತಿದ್ದು, ಅಧಿಕಾರಿಗಳು ಆಡಳಿತ ಮಂಡಳಿ ಸೇರಿ 20 ಜನರನ್ನು ಕರೆದುಕೊಂಡು ಹೋಗುತ್ತಿದ್ದೇನೆ. ರಾಜ್ಯದ ನಂದಿನಿಯನ್ನು ಭವಿಷ್ಯದಲ್ಲಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಹೋಗುತ್ತಿದ್ದೇವೆ” ಎಂದರು.

ದೆಹಲಿ ಪ್ರವಾಸದಲ್ಲಿ ರಾಜಕಾರಣ ಇದೆಯೇ ಎಂದು ಕೇಳಿದಾಗ, “ರಾಜಕಾರಣ ಏನಿಲ್ಲ. ಎಲ್ಲಾ ರಾಜಕಾರಣ ಕರ್ನಾಟಕದಲ್ಲಿ ಮಾಧ್ಯಮಗಳ ಬಳಿಯೇ ಇದೆ” ಎಂದರು.

ಶಾಸಕರ ಪ್ರವಾಸಕ್ಕೂ ಶಿವಕುಮಾರ್ ಅವರಿಗೂ ಸಂಬಂಧವಿಲ್ಲ

ನಾಯಕತ್ವ ಬದಲಾವಣೆ ಚರ್ಚೆ ವೇಳೆ ಬಜೆಟ್ ಗೂ ಮುನ್ನ ಕೆಲವು ಶಾಸಕರು ವಿದೇಶ ಪ್ರವಾಸಕ್ಕೆ ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ, “ವಿದೇಶ ಪ್ರವಾಸಕ್ಕೆ ಹೋಗುತ್ತಿರುವವರು ಯಾರು? ಕರೆದುಕೊಂಡು ಹೋಗುವವರು ಯಾರು? ಯಾರೋ ಹೇಳಿದ್ದನ್ನು ಶಿವಕುಮಾರ್ ಅವರ ಮೇಲೆ ಯಾಕೆ ಹೇಳುತ್ತೀರಿ. ಡಿ.ಕೆ. ಶಿವಕುಮಾರ್ ಅವರಿಗೂ ಶಾಸಕರ ಪ್ರವಾಸಕ್ಕೆ ಯಾವುದೇ ಸಂಬಂಧವಿಲ್ಲ. ಈ ವಿಚಾರವಾಗಿ ಬಹಳ ಸ್ಪಷ್ಟವಾಗಿ ಹೇಳುತ್ತೇನೆ. ಶಾಸಕರ ಪ್ರವಾಸ ವೈಯಕ್ತಿಕವಾಗಿಯೂ ಇರಬಹುದು, ಬೇರೆಯವರ ಪ್ರಯೋಜಕತ್ವವೂ ಇರಬಹುದು. ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂಗೂ ಈ ಪ್ರವಾಸಕ್ಕೂ ಸಂಬಂಧವಿಲ್ಲ. ಈ ರೀತಿ ಏನಾದರೂ ಹುಟ್ಟಾಕುತ್ತಿದ್ದರೆ, ಅದು ರಾಜಕೀಯ ದುರುದ್ದೇಶದಿಂದ ಮಾತ್ರ. ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರಲು ನಮ್ಮ ಪಕ್ಷದ ಕೆಲವರು ಮಾಡುತ್ತಿರಬಹುದು. ನಮ್ಮ ಪಕ್ಷದವರು ಮಾಡುತ್ತಿದ್ದಾರೋ, ವಿರೋಧ ಪಕ್ಷದವರು ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೆ ಇದರಲ್ಲಿ ಶಿವಕುಮಾರ್ ಅವರು ಪಾಲುದಾರರಲ್ಲ” ಎಂದು ಸ್ಪಷ್ಟಪಡಿಸಿದರು.

ನೀವು ಹಾಗೂ ಶಿವಕುಮಾರ್ ಅವರು ತಾಳ್ಮೆ ಬಗ್ಗೆ ಮಾತನಾಡುತ್ತಿದ್ದಿರಿ ಎಂದು ಕೇಳಿದಾಗ, “ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ” ಎಂದರು.

ಆ ಕಾಲ ಹತ್ತಿರಕ್ಕೆ ಬರುತ್ತಿದೆಯೇ ಎಂದು ಕೇಳಿದಾಗ, “ನಾನು ಹಾಗೆ ಭಾವಿಸಿದ್ದು, ನೀವುಗಳೂ ಹಾಗೇ ಭಾವಿಸಿಕೊಳ್ಳಿ” ಎಂದರು.

ನೀವು ನಿಮ್ಮ ಸಹೋದರನಿಗೆ ಹೊಸ ಕಾರು ಉಡುಗೊರೆ ಕೊಟ್ಟಿದ್ದೀರಿ ಎಂದು ಕೇಳಿದಾಗ, “ಅದು ಸಾಹೇಬರಿಗೆ ಅಲ್ಲ” ಎಂದರು.

ಜಿಬಿಎ ಚುನಾವಣೆ ಮತ್ತೆ ಮುಂದಕ್ಕೆ ಹೋಗುವ ಚರ್ಚೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ನಮ್ಮ ಕ್ಷೇತ್ರಗಳಲ್ಲಿ ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಫಲಿತಾಂಶ ಒಳ್ಳೆಯದಾಗುತ್ತದೆಯೋ, ಕೆಟ್ಟದಾಗುತ್ತದೋ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮಾಡಲೇ ಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದರು.

ನಾನು ಹಾಗೂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ, ಹೈಕಮಾಂಡ್ ನಾಯಕರ ಮುಂದೆ ಮಾತನಾಡುತ್ತಿದ್ದೇವೆ ಎಂಬ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಹೇಳಿರುವುದು ಶಿವಕುಮಾರ್ ಅವರು, ನನ್ನನ್ನು ಕೇಳಿದರೆ, ನಾನು ಏನು ಹೇಳಲಿ” ಎಂದರು.

ಸಿಎಂ ಕೊಟ್ಟ ಮಾತಿನಂತೆ ನಡೆಯುತ್ತಾರೆ ಎಂದು ನೀವು ಹೇಳಿದ್ದಿರಿ ಎಂದು ಕೇಳಿದಾಗ, “ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆಯುತ್ತಾರೆ ಎಂದು ಇವತ್ತಿಗೂ ನನಗೆ ಭರವಸೆ ಇದೆ” ಎಂದರು.

ಹಾಗಿದ್ದರೆ ನೀವು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಅಗತ್ಯ ಇಲ್ಲವೇ ಎಂದು ಕೇಳಿದಾಗ, “ನಾವು ದೆಹಲಿಗೆ ಹೋದಾಗ ಹೈಕಮಾಂಡ್ ನಾಯಕರು ಸಿಕ್ಕಾಗೆಲ್ಲ ಭೇಟಿ ಮಾಡುತ್ತಲೇ ಇರುತ್ತೇವೆ. ಕೆಲವು ವಿಚಾರ ಚರ್ಚೆ ಮಾಡುತ್ತಲೇ ಇರುತ್ತೇವೆ. ಅದು ನಮ್ಮ ಹಾಗೂ ಅವರ ಬಾಂಧವ್ಯದ ವಿಚಾರ. ಪಕ್ಷ, ಕ್ಷೇತ್ರ ಹಾಗೂ ಇತರೆ ವಿಚಾರ ಚರ್ಚೆ ಮಾಡುತ್ತೇವೆ. ಕೆಲವರು ನಿರ್ದಿಷ್ಟ ಕೆಲಸಕ್ಕಾಗಿ ದೆಹಲಿಗೆ ಹೋಗುತ್ತಾರೆ. ಶಿವಕುಮಾರ್ ಅವರು ಆ ವರ್ಗಕ್ಕೆ ಸೇರುವುದಿಲ್ಲ” ಎಂದರು.

ಸಿಎಂ ಪರವಾದ 25 ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, “ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ವಿಚಾರವನ್ನು ಯಾರು ಪ್ರವಾಸಕ್ಕೆ ಹೋಗುತ್ತಿದ್ದಾರೆ ಹಾಗೂ ಈ ಪ್ರವಾಸದ ಆಯೋಜಕರನ್ನು ಕೇಳಬೇಕು. ಶಿವಕುಮಾರ್ ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅಷ್ಟನ್ನು ಮಾತ್ರ ನಾನು ಸ್ಪಷ್ಟಪಡಿಸುತ್ತೇನೆ” ಎಂದು ತಿಳಿಸಿದರು.

ಶಿವಕುಮಾರ್ ಅವರ ಬೆಂಬಲಿಗ ಶಾಸಕರು ರೆಸಾರ್ಟ್ ಗೆ ತೆರಳುತ್ತಿದ್ದಾರೆ ಎಂದು ಕೇಳಿದಾಗ, “ನೀವೆಲ್ಲರೂ (ಮಾಧ್ಯಮಗಳು) ಕರೆದುಕೊಂಡು ಹೋಗಿ ಎಂದರೆ, ಹೋಗುತ್ತಾರೆ” ಎಂದರು.

ಕೌಶಲ್ಯಾಭಿವೃದ್ಧಿ ಯೋಜನೆಯಲ್ಲಿ ಹಗರಣ: ಕೇಂದ್ರ ಉತ್ತರಿಸಬೇಕು

ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಯೋಜನೆಯಲ್ಲಿನ ಹಗರಣ ನಡೆದಿದೆ ಎಂಬ ಸಿಎಜಿ ವರದಿ ಬಗ್ಗೆ ಕೇಳಿದಾಗ, “ಇದು ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆ. ಇದರಲ್ಲಿ ಯಾವುದೇ ಹೊಣೆಗಾರಿಕೆ ನಿಗದಿಪಡಿಸದೇ, ಕೇಂದ್ರ ಸರ್ಕಾರ ತನಗೆ ಬೇಕಾದ ಸಂಸ್ಥೆಗಳನ್ನು ಗುರುತಿಸಿತ್ತು. ಯುವಕರ ಕೌಶಲ್ಯ ವೃದ್ಧಿಗೆ ತರಬೇತಿ ನೀಡಿ, ಅವರಿಗೆ ಉದ್ಯೋಗ ನೀಡುವ ಉದ್ದೇಶ ಈ ಯೋಜನೆಯದ್ದಾಗಿತ್ತು. ಆದರೆ ಇಲ್ಲಿ ಕೌಶಲ್ಯ ಪಡೆದವರು, ಉದ್ಯೋಗ ಪಡೆದವರು ಇಲ್ಲ. ಹಣ ಮಾತ್ರ ಖಾಲಿಯಾಗಿದೆ. ಈ ಹಣ ಎಲ್ಲಿ ಹೋಗಿದೆ ಎಂದು ಹುಡುಕಬೇಕಿದೆ. ಇದು ಕೇವಲ ಕರ್ನಾಟಕ ಮಾತ್ರವಲ್ಲ ದೇಶದಾದ್ಯಂತ ಈ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಇದಕ್ಕಾಗಿ ಲಕ್ಷಾಂತರ ಕೋಟಿ ವೆಚ್ಚ ಮಾಡಿದೆ. ಕೇಂದ್ರ ಸರ್ಕಾರ ಇಷ್ಟೆಲ್ಲಾ ಖರ್ಚು ಮಾಡಿದ್ದರೂ ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದ ನಿರುದ್ಯೋಗ ಸಮಸ್ಯೆ ಯಾಕೆ ಇದೆ ಎಂದರೆ ಈ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಇದರಲ್ಲಿ ಬಿಜೆಪಿ ನಾಯಕ ಕೈವಾಡವಿದೆ. ಆರ್ ಎಸ್ಎಸ್ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸಂಸ್ಥೆಗಳು ಇದರಲ್ಲಿ ಭಾಗಿಯಾಗಿವೆ” ಎಂದರು.

“ಕೇಂದ್ರ ಸರ್ಕಾರ ಏನೇ ಮಾಡಿದರೂ ಯಾರು ಕೇಳುವಂತಿಲ್ಲ. ದೇಶದಲ್ಲಿ ಅಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಕರ್ನಾಟಕ ಮಾತ್ರವಲ್ಲ, ದೇಶವ್ಯಾಪ್ತಿ ಈ ಪರಿಸ್ಥಿತಿ ಇದೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಅವರ ಸರ್ಕಾರ ಇದನ್ನು ಮುಚ್ಚಿಹಾಕಿಕೊಂಡಿದೆ. ಕರ್ನಾಟಕದಲ್ಲಿ ಸಿಎಜಿ ವರದಿ ಇದನ್ನು ಬಹಿರಂಗಪಡಿಸಿದೆ. ಈ ವಿಚಾರದಲ್ಲಿ ತನಿಖೆ ಆಗಬೇಕು, ಕೇಂದ್ರ ಸರ್ಕಾರ ಉತ್ತರ ನೀಡಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂದು ಬಯಲು ಮಾಡಬೇಕು” ಎಂದು ಆಗ್ರಹಿಸಿದರು.

ಸಂಸತ್ತಿನಲ್ಲಿ ಪ್ರಧಾನಿ ಮೇಲೆ ಮಹಿಳಾ ಸಂಸದರು ಹಲ್ಲೆ ಮಾಡಲು ಮುಂದಾದರು ಎಂಬ ಆರೋಪದ ಬಗ್ಗೆ ಕೇಳಿದಾಗ, “ಸದನದ ಬಾವಿಗಿಳಿದು ಪ್ರತಿಭಟನೆ ಮಾಡುವುದು ಸದಸ್ಯರ ಹಕ್ಕು. ಸಂಸತ್ತಿನಲ್ಲೇ ಆಗಲಿ, ವಿಧಾನಮಂಡಲ ಅಧಿವೇಶನದಲ್ಲೇ ಆಗಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಾವಿಗಿಳಿದು ಹೋರಾಟ ಮಾಡಲು ಅವಕಾಶವಿದೆ. ಬಾವಿಗಿಳಿದು ಪ್ರಧಾನಿಮುಂದೆ ನಿಂತರು ಎಂದ ಮಾತ್ರಕ್ಕೆ ಪ್ರಧಾನಮಂತ್ರಿ ಮೇಲೆ ಹಲ್ಲೆ ಮಾಡುವ ಸಹೋದರಿ ಸಂಸದೆಯರು ಯಾರು ಇಲ್ಲ. ನಾನು ಲೋಕಸಭೆಯಲ್ಲಿ 11 ವರ್ಷ ಕೆಲಸ ಮಾಡಿದ್ದೇವೆ. ಪ್ರಧಾನಿ ಮುಂದೆ ನಿಂತಿದ್ದೇವೆ. ಅವರ ಮುಂದೆ ನಿಂತ ಮಾತ್ರಕ್ಕೆ ಹಲ್ಲೆ ಮಾಡಿದಂತೆ ಅಲ್ಲ. ವಿಧಾನಸಭೆಯಲ್ಲೂ ಮುಖ್ಯಮಂತ್ರಿಗಳ ಮುಂದೆ ಹೋಗಿ ಪ್ರತಿಭಟನೆ ಮಾಡುತ್ತಾರೆ. ಆಗ ಸ್ಪೀಕರ್ ಅವರು ಪಕ್ಕಕ್ಕೆ ಬರುವಂತೆ ಸೂಚನೆ ನೀಡುತ್ತಾರೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಇಲ್ಲವಾದ ಕಾರಣ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ. ಮಹಿಳಾ ಸಂಸದರು ಪ್ರಧಾನಿಗಳ ಮೇಲೆ ಹಲ್ಲೆ ಮಾಡುವ ಪರಿಸ್ಥಿತಿ ಇದೆಯಾ? ಇಲ್ಲವೇ ಎಂದು ಆಲೋಚಿಸಬೇಕು. ಸ್ಪೀಕರ್ ಅವರು ನಿಷ್ಪಕ್ಷಪಾತವಾಗಿ ನ್ಯಾಯ ಸಮ್ಮತವಾಗಿ ತೀರ್ಪು ನೀಡಬೇಕು” ಎಂದು ತಿಳಿಸಿದರು.

ಅವಿಶ್ವಾಸ ನಿರ್ಣಯ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ನೈತಿಕತೆ ಆಧಾರದ ಮೇಲೆ ಸದನಕ್ಕೆ ಬರಲು ನಿರಾಕರಿಸಿದ್ದಾರೆ ಎಂದು ಕೇಳಿದಾಗ, “ಇಲ್ಲಿ ನೈತಿಕತೆ ಮುಖ್ಯ. ಅವಿಶ್ವಾಸ ನಿರ್ಣಯದಲ್ಲಿ ಏನೂ ಆಗುವುದಿಲ್ಲ. ಅವರಿಗೆ ಬಹುಮತವಿದೆ. ಹೀಗಾಗಿ ಅವಿಶ್ವಾಸ ನಿರ್ಣಯ ಸೋಲಲಿದೆ. ಹಾಗೆಂದ ಮಾತ್ರಕ್ಕೆ ಅವರ ಆರೋಪ ವಸ್ತು ಸ್ಥಿತಿಯೇ ಅಲ್ಲವೇ ಎಂಬುದು ಮುಖ್ಯ. ಅದು ವಸ್ತುಸ್ಥಿತಿಯಲ್ಲವಾದರೆ ಅವರು ಸುಳ್ಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕ್ಷಮೆ ಕೋರಬೇಕು. ಲೋಕಸಭೆ ಘನತೆ ಎತ್ತಿ ಹಿಡಿಯಬೇಕಾಗಿರುವುದು ಸ್ಪೀಕರ್ ಅವರ ಕರ್ತವ್ಯ” ಎಂದು ಆಗ್ರಹಿಸಿದರು.

ರಾಷ್ಟ್ರಪತಿ ಭಾಷಣ ವಂದನಾ ನಿರ್ಣಯವನ್ನು ಪ್ರಧಾನಮಂತ್ರಿಗಳ ಉತ್ತರ ವಿಲ್ಲದೇ ಅಂಗೀಕಾರ ಮಾಡಿರುವ ಬಗ್ಗೆ ಕೇಳಿದಾಗ, “ಅದಕ್ಕೆ ಇನ್ನು ಸಮಯವಿದೆ. ಅವರು ಲೋಕಸಭೆಯಲ್ಲಿ ತಮಗೆ ಬೇಕಾದ ಬಿಲ್ ಅನುಮೋದನೆ ನೀಡುತ್ತಾರೆ. ಮಹಿಳಾ ಸಂಸದೆಯರ ಮೇಲೆ ಮಾಡಿರುವ ಆರೋಪ ನಿರಾಧಾರ, ರಾಜಕೀಯ ಪ್ರೇರಿತ” ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

11/02/2026 3:46 PM1 Min Read

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM1 Min Read

BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ

11/02/2026 3:37 PM1 Min Read
Recent News

BREAKING : ‘ತೀವ್ರ ಆಘಾತ’: ಕೆನಡಾ ಶಾಲೆಯಲ್ಲಿ ಭೀಕರ ಗುಂಡಿನ ದಾಳಿಗೆ 10 ಮಂದಿ ಬಲಿ, ಪ್ರಧಾನಿ ಮೋದಿ ಸಂತಾಪ

11/02/2026 3:46 PM

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

11/02/2026 3:46 PM

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM
State News
KARNATAKA

ಬೆಂಗಳೂರಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ದುರ್ಮರಣ, ಚಾಲಕ ಅರೆಸ್ಟ್!

By kannadanewsnow0511/02/2026 3:46 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿರುವ…

ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

11/02/2026 3:45 PM

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM

BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ

11/02/2026 3:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.