ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.
ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ
ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.
ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್








