ದಕ್ಷಿಣ ಕನ್ನಡ: ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆಯುಂಟಾಗಿದೆ. ಈ ವೇಳೆ ಇಬ್ಬರು ಸಹಪಾಠಿಗಳಿಗೆ ಪೆನ್, ಚಾಕುವಿನಿಂದ ವಿದ್ಯಾರ್ಥಿ ಇರಿದಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಚೂರಿಯಿಂದ ಇರಿದು ಅಪ್ರಾಪ್ತನ ಮೇಲೆ ಹೇಮಂತ್ ಎಂಬಾತ ಹಲ್ಲೆಗೈದಿದ್ದಾನೆ. ಜಗಳ ಬಿಡಿಸಲು ಬಂದ ಮತ್ತೊಬ್ಬ ವಿದ್ಯಾರ್ಥಿಯ ಮೇಲೂ ಹಲ್ಲೆ ಮಾಡಲಾಗಿದೆ.
ಗಾಯಾಳು ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಲಾಟೆ ವಿಚಾರ ತಿಳಿದು ಆರೋಗ್ಯ ಕೇಂದ್ರದ ಬಳಿ ಜನರು ಸೇರಿದ್ದಾರೆ. ಜನರನ್ನು ಚದುರಿಸಲು ಆಸ್ಪತ್ರೆಯ ಬಳಿಯಲ್ಲಿ ವಿಟ್ಲ ಪೊಲೀಸರು ಲಾಠಿ ಬೀಸಿದ್ದಾರೆ.
ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂಟ್ವಾಳ ಡಿವೈಎಸ್ಪಿ ಭೇಟಿ ನೀಡಿದ್ದಾರೆ. ಹಲ್ಲೆಗೈದಿದ್ದ ವಿದ್ಯಾರ್ಥಿ ಹೇಮಂತ್ ನನ್ನು ವಶಕ್ಕೆ ಪೊಲೀಸರು ಪಡೆದಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING: ಪರೀಕ್ಷೆಗೆ ಹೆದರಿ SSLC ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ








