ಬೆಂಗಳೂರು : ದೆಹಲಿಗೆ ಹಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು 20 ನಿಮಿಷಗಳ ಕಾಲ ರಾಜ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಯ ಜನಪಥನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಹಾಗಾಗಿ ಇದೀಗ ಕಾಂಗ್ರೆಸ್ ಪಟ್ಟದ ಆಟ ರೋಚಕ ಘಟ್ಟಕ್ಕೆ ತಲುಪಿದೆ. ಹೈಕಮಾಂಡ್ ಮಟ್ಟದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಫೈನಲ್ ಆಟ ಆಡಿದ್ದು, ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ .








