ನವದೆಹಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಅದರ ಬದನಲ್ಲೇ ನಿನ್ನೆ ಭೈರತಿ ಬಸವರಾಜ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರು.
ಇದೀಗ ಸುಪ್ರೀಂ ಕೋರ್ಟ್ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ. ವಿಚಾರಣೆಯ ವೇಳೆ ನಿಯಮಿತ ಜಾಮೀನುಗೆ ಅರ್ಜಿ ಹಾಕಿ ಎಂದು ಸುಪ್ರೀಂ ಕೋರ್ಟ್ ಇದೆ ವೇಳೆ ತಿಳಿಸಿತು. ಹಾಗಾಗಿ ಶಾಸಕ ಭೈರತಿ ಬಸವರಾಜ ಮತ್ತಷ್ಟು ಬಂಧನದ ಭೀತಿ ಎದುರಾಗಿದೆ ಈಗಾಗಲೇ CID ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣ ಹಿನ್ನೆಲೆ?
ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. . ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.








