ನವದೆಹಲಿ : ಆಳಂದದಲ್ಲಿರುವ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ಶಿವರಾತ್ರಿ ಹಬ್ಬದಂದು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ನಿನ್ನೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ, ದರ್ಗಾದ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ಸಹ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ ನೀಡಿದೆ.ಸುಪ್ರೀಂಕೋರ್ಟ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ತಡೆ ನೀಡಲು ನಿರಾಕರಿಸಿದೆ
ಅರ್ಜಿ ಹಿಂಪಡೆಯಲು ದರ್ಗಾದ ಪರ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಇದೆ ವೇಳೆ ಸೂಚನೆ ನೀಡಿತು. ಸಂವಿಧಾನದ 32ನೇ ವಿಧಿ ಇರುವುದು ಇಂತಹ ಉದ್ದೇಶಕ್ಕೆ ಅಲ್ಲ ಎಂದು ದರ್ಗಾದ ಪರರಿದಾರರಿಗೆ ಸುಪ್ರೀಂ ಕೋರ್ಟ್ ತಿಳಿಸಿತು. ರಾಜ್ಯ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಆಳಂದದಲ್ಲಿರುವ ದರ್ಗಾದಲ್ಲಿ ಪೂಜೆ ಅವಕಾಶ ಕಲ್ಪಿಸಿದೆ.
ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಅವಕಾಶ ಕಲ್ಪಿಸಿದೆ. ಶಿವರಾತ್ರಿ ಹಬ್ಬದಂದು ಪೂಜೆಗೆ ಅವಕಾಶ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಆಳಂದ ಲಾಡ್ಲೆ ಮಶಾಕ್ ದರ್ಗಾ ಆಡಳಿತ ಮಂಡಳಿ ಅರ್ಜಿ ಸಲ್ಲಿಸಿತ್ತು. ಇದೀಗ ಸುಪ್ರೀಂಕೋರ್ಟ್ ಸಹ ದರ್ಗಾದಲ್ಲಿ ಪೂಜೆಗೆ ಅನುಮತಿ ನೀಡಿದೆ.








