ಮೈಸೂರು : ಬಿಜೆಪಿ ಐಟಿ ಸೆಲ್ ಮತ್ತು ಪ್ರತಾಪ್ ಸಿಂಹ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಗೆ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ಇದೀಗ ದೂರು ಸಲ್ಲಿಸಲಾಗಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ ನೇತೃತ್ವದಲ್ಲಿ ಮುಖಂಡರು ದೂರು ನೀಡಿದ್ದಾರೆ.
ಕಮಿಷನ್ ಮಸೂಲಿ, ವರ್ಗಾವಣೆ ದಂಧೆ ಸಚಿವ ಯತೀಂದ್ರ ಎಂದು ಪೋಸ್ಟ್ ಹಾಕಿದ್ದರು. ಯತೀಂದ್ರ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿ ಪೋಸ್ಟ್ ಹಂಚಿಕೊಂಡಿದ್ದರು. ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ಇದೀಗ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಕೆಯಾಗಿದೆ.








