ಧಾರವಾಡ : ಕ್ಷುಲ್ಲಕ ಕಾರಣಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷನ ತಮ್ಮನಿಂದ ಮೂವರ ಮೇಲೆ ಮಾರಕಾಸ್ತ್ರರಗಳಿಂದ ಹಲ್ಲೆ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ಕಾರಿಗೆ ಚಕ್ಕಡಿ ಡಿಕ್ಕಿ ಹೊಡೆದಿದ್ದಕ್ಕೆ ಮೋಹರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಹನುಮಂತ್ ಕರಿಗಾರ್ ಎಂಬಾತ ಮೂವರ ಮೇಲೆ ಹಲ್ಲೆ ಮಾಡಿದ್ದಾನೆ. ಚಕ್ಕಡಿಯಲ್ಲಿದ್ದ ಸೋಮಶೇಖರ ಬೆಂಗೇರಿ, ರಮೇಶ್ ಬೆಂಗೇರಿ ಹಾಗೂ ಮಂಜುನಾಥ್ ಬಳ್ಳೊಳ್ಳಿ ಮೇಲೆ ಹನುಮಂತ ಹಲ್ಲೆ ಮಾಡಿದ್ದಾನೆ.
ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಸಹೋದರನಾಗಿರುವ ಹನುಮಂತ ಮೂವರ ಮೇಲೆ ಹಲ್ಲೆ ಮಾಡಿದ್ದು, ಹಲ್ಲೆಗೋಳಗಾದ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಹನುಮಂತ ಕರಿಗಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








