ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರನ್ನು ಕೊನೆಗೂ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೇ ಇಂದು ಸುಪ್ರೀಂ ಕೋರ್ಟ್ ಕೂಡ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಪೊಲೀಸರಿ ಶರಣಾಗಲು ತಯಾರಿ ನಡೆಸಿದ್ದರು.
ಈ ವಿಷಯ ತಿಳಿಯುತ್ತಿದ್ದಂತೆ ಸಿಐಡಿ ಪೊಲೀಸರು ಅಲರ್ಟ್ ಆಗಿದ್ದಾರೆ. ಅಹಮದಾಬಾದ್ ನಿಂದ ಬೆಂಗಳೂರಿಗೆ ಇಂಡಿಗೋ 6ಇ863 ವಿಮಾನದಲ್ಲಿ ಆಗಮಿಸುತ್ತಿರುವಂತ ವಿಷಯ ತಿಳಿದು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬೀಡು ಬಿಟ್ಟಿದ್ದರು. ಬಿಜೆಪಿ ಶಾಸಕ ಭೈರತಿ ಬಸವರಾಜು ಅವರು ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಅವರನ್ನು ಬಂಧಿಸಿದ್ದಾರೆ. ಆ ಮೂಲಕ ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರನ್ನು ಕೊನೆಗೂ ಬಂಧಿಸಿದಂತೆ ಆಗಿದೆ.
ಅಂದಹಾಗೇ ಭೈರತಿ ಬಸವರಾಜು ಅವರು ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ. ಅವರ ವಿರುದ್ಧ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರು ಎ5 ಆರೋಪಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನಲೆಯಲ್ಲಿ ಸಿಐಡಿ ಪೊಲೀಸರು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿಯೇ ಬಂಧಿಸಿದ್ದಾರೆ.
ಶ್ರೀರಾಮ, ಶ್ರೀಕೃಷ್ಣ, ಗಾಂಧೀಜಿಗೆ ಅವಹೇಳನ: ಇಬ್ಬರ ವಿರುದ್ಧ ‘FIR’ ದಾಖಲು
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








