ದಕ್ಷಿಣ ಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೇ ಕರೆದೊಯ್ಯಬೇಕು ಎಂಬುದು ನಿಯಮ. ಈ ನಿಯಮವನ್ನೇ ಮೀರಿದಂತ ಶಾಲೆಯೊಂದು, ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳೆಂಜ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್ ಮೂಲಕ ಪ್ರವಾಸಕ್ಕೆ ಕರೆದೊಯ್ದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ವೀಡಿಯೋ, ಪೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡ ಆಗಿದ್ದವು.
ಈ ಹಿನ್ನಲೆಯಲ್ಲಿ ಬಳೆಂಜ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಶಶಿಧರ್ ಆದೇಶ ಮಾಡಿದ್ದಾರೆ. ಆ ಮೂಲಕ ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕನಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದೆ.
ಫೆ.15ರಂದು ಮಹಾ ಶಿವರಾತ್ರಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ ಜಿಬಿಎ ಆದೇಶ
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








