ಬೆಂಗಳೂರು: ಅಂತೂ ಇಂತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.6ರಂದು ದಾಖಲೆಯ ಬಾರಿಗೆ ತಮ್ಮ ಚೊಚ್ಚಲ 16ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗಧಿ ಮಾಡಲಾಗಿದೆ.
ಮಾರ್ಚ್.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಅಧಿವೇಶನದ ಮೊದಲ ದಿನವಾದಂತ ಮಾರ್ಚ್.6ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್.6ರಂದು ಕರ್ನಾಟಕ ರಾಜ್ಯ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಮಂಡಿಸಲಿದ್ದಾರೆ.
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್








