ಬೆಂಗಳೂರು: ಆರ್ ಸಿ ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ನಂತ್ರ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಆರ್ ಸಿ ಬಿ ಕಾಲ್ತುಳಿತದ ನಂತ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಟಕ್ಕೆ ತೊಡಕು ಉಂಟಾಗಿತ್ತು. ಇದಕ್ಕಾಗಿ ಸರ್ಕಾರ ಸಮಿತಿಯನ್ನು ರಚಿಸಿತ್ತು. ಈ ವರದಿಯ ಶಿಫಾರಸ್ಸಿನ ನಿಯಮಗಳನ್ನು ಅಳವಡಿಸಿಕೊಂಡು, ಐಪಿಎಲ್ ಪಂದ್ಯಾವಳಿಗಳನ್ನು ಆಡೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ ಪಂದ್ಯಾವಳಿಯನ್ನು ಆಡಿಸೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಪಂದ್ಯಾವಳಿಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ನಡೆಯಲಿವೆ. ಆ ಮೂಲಕ ಐಪಿಎಲ್ ಪ್ರಿಯರಿಗೆ, ಆರ್ ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಂತೆ ಆಗಿದೆ.
ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್








