ಬೆಂಗಳೂರು: ಆರ್ ಸಿ ಬಿ ಕಾಲ್ತುಳಿತದ ನಂತ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಟಕ್ಕೆ ತೊಡಕು ಉಂಟಾಗಿತ್ತು. ಇದಕ್ಕಾಗಿ ಸರ್ಕಾರ ಸಮಿತಿಯನ್ನು ರಚಿಸಿತ್ತು. ಈ ವರದಿಯ ಶಿಫಾರಸ್ಸಿನ ನಿಯಮಗಳನ್ನು ಅಳವಡಿಸಿಕೊಂಡು, ಐಪಿಎಲ್ ಪಂದ್ಯಾವಳಿಗಳನ್ನು ಆಡೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ ಪಂದ್ಯಾವಳಿಯನ್ನು ಆಡಿಸೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳಿಗೆ, 30-35 ಸಾವಿರ ಜನ ಸೇರುವ ಬಗ್ಗೆ ಅನುಮತಿ ನೀಡಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೆ.ಎಸ್.ಸಿ.ಎ. ಮನವಿ ಮೇರೆಗೆ ಸರ್ಕಾರ ಪರಿಶೀಲನೆ ನಡೆಸಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಿದೆ.








