ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಬೆಳ್ಳಂ ಬೆಳಗ್ಗೆ ಕೊಟ್ಟಿಗೆಗೆ ನುಗ್ಗಿ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳನ್ನು ಚಿರತೆ ಕೊಂದು ತಿಂದಿದೆ.
ಗ್ರಾಮದ ಸಿದ್ದೇಗೌಡ ಎಂಬುವವರಿಗೆ ಸೇರಿದ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ. ತೋಟದಲ್ಲಿಯೇ ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ. ಚಿರತೆ ಉಪಟಳದಿಂದ ಸುತ್ತಮುತ್ತಲಿನ ಗ್ರಾಮಸ್ಥರು ಕೂಡ ಭಯಭೀತರಾಗಿದ್ದಾರೆ.








