ಚಾಮರಾಜನಗರ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.
ಮೈಸೂರಿನಿಂದ ಕೆಎಸ್ಆರ್ಟಿಸಿ ಬಸ್ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿತ್ತು. ಈ ವೇಳೆ ಎದುರಿಗೆ ಬಂದ ಖಾಸಗಿ ಬಸ್ ಬೆಟ್ಟದ 4ನೇ ತಿರುವಿನಲ್ಲಿ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಒಂದು ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








