ಬೆಂಗಳೂರು: ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ… pic.twitter.com/yr3kvPMF5o
— Siddaramaiah (@siddaramaiah) February 13, 2026
ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ
BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!








