ಬೆಂಗಳೂರು : ಹಿರಿಯ ನಿರ್ದೇಶಕ, ನಟ ಜೋ ಸೈಮನ್ ನಿನ್ನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ನಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಹೃದಯಾಘಾತ ಉಂಟಾಗಿ ಜೋ ಸೈಮನ್ ಅವರು ನಿಧನ ಹೊಂದಿದ್ದಾರೆ.
ಜೋ ಸೈಮನ್ ಅವರ ಅಂತಿಮ ದರ್ಶನವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಇಂದೇ ಕ್ರಿಶ್ಚಿಯನ್ ವಿಧಿ-ವಿಧಾನಗಳ ಅನುಸಾರ ಅವರ ಅಂತಿಮ ಕಾರ್ಯಗಳು ನಡೆಯಲಿವೆ.
ಸಿನೆಮಾ ರಂಗದಲ್ಲಿ ಜೋ ಸೈಮನ್ ಅವರು ನಡೆದು ಬಂದ ಹಾದಿ
ಮಂಡ್ಯ ಮೂಲದ ಜೊ ಸೈಮನ್ ಆರಂಭದಲ್ಲಿ ಟಚ್ ಅಪ್ ಬಾಯ್, ಸಹಾಯಕ ಮೇಕ್ಅಪ್ ಮ್ಯಾನ್ ಮತ್ತು ಸೆಟ್ ಬಾಯ್ ಆಗಿ ಕೆಲಸ ಮಾಡಿದ್ದರು. ನಂತರ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಕೆ.ಎಸ್.ಆರ್.ದಾಸ್, ಆರ್.ಎನ್. ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ.
ವಿಷ್ಣುವರ್ಧನ್ ಅಭಿನಯದ ಸಾಹಸಸಿಂಹ ಚಿತ್ರದ ನಿರ್ದೇಶಕರಾಗಿದ್ದ ಜೊ ಸೈಮನ್ ಸಿಂಹದ ಜೋಡಿ, ನನ್ನ ರೋಷ ನೂರು ವರುಷ, ಮಹಾ ಪ್ರಚಂಡರು, ಸಾಹಸಸಿಂಹ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದರು.ಕರ್ನಾಟಕ ಚಾಲನಚಿತ್ರ ಅಕಾಡೆಮಿ ಜೊ ಸೈಮನ್ ಅವರ ಜೀವಿತಾವಧಿ ಸಾಧನೆ ಗುರುತಿಸಿ 2013 ರಲ್ಲಿ ರಲ್ಲಿ ಬಿ.ಆರ್.ಪಂತುಲು ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.








