Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್
KARNATAKA

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ  ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಸೇವೆಯಿಂದ ಸ್ವಯಂನಿವೃತ್ತರಾಗಿ ಕಾವಿ ಧರಿಸಿ ಪೀಠಾಧಿಪತಿಯಾಗಿರುವವರಿಗೂ “ಬಡ್ತಿ ಭಾಗ್ಯ” ನೀಡುವ ಮಟ್ಟಕ್ಕೆ! ಒಬ್ಬ ಅಧಿಕಾರಿ ಸೇವೆಯಿಂದ ನಿವೃತ್ತರಾಗಿ, ಸಂನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಜೀವನ ನಡೆಸುತ್ತಿದ್ದರೂ, ನಿಮ್ಮ ಸರ್ಕಾರದ ದಾಖಲೆಗಳಲ್ಲಿ ಅವರು ಇನ್ನೂ “ಸೇವೆಯಲ್ಲಿರುವ ಅಧಿಕಾರಿ”! ನಿಮ್ಮ ಘನಂದಾರಿ ಆಡಳಿತದಲ್ಲಿ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಸಹಿ ಮಾಡುವ ಮುನ್ನ ಫೈಲುಗಳನ್ನು ಓದುತ್ತಾರೋ ಕಣ್ಣು ಮುಚ್ಚಿಕೊಂಡು ಸಹಿ ಹಾಕುತ್ತಾರೋ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವ ಅಧಿಕಾರಿಗಳು ಸೇವೆಯಲ್ಲಿ ಇದ್ದಾರೆ, ಯಾರು ನಿವೃತ್ತರಾಗಿದ್ದಾರೆ ಅನ್ನುವ ಕನಿಷ್ಠ ಮಾಹಿತಿಯೂ ಗೊತ್ತಿಲ್ಲದಿದ್ದರೆ, ರಾಜ್ಯದ ಜನತೆ ಆಡಳಿತ ಮತ್ತು ಅಭಿವೃದ್ಧಿ ವಿಚಾರದಲ್ಲಿ ನಿಮ್ಮ ಸರ್ಕಾರದ ಮೇಲೆ ಹೇಗೆ ವಿಶ್ವಾಸ ಇಡಬೇಕು ಸ್ವಾಮಿ? ಇವತ್ತು ನಿವೃತ್ತರಾಗಿರುವ ಅಧಿಕಾರಿಯೊಬ್ಬರಿಗೆ ಬಡ್ತಿ ನೀಡಿದ್ದೀರಿ, ನಾಳೆ ನಿಧನ ಹೊಂದಿರುವ ಅಧಿಕಾರಿಗೆ ವರ್ಗಾವಣೆ ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ ಎಂದು ಗುಡುಗಿದ್ದಾರೆ.

ಇದು ಕೇವಲ ಒಂದು ಆಕಸ್ಮಿಕ ಯಡವಟ್ಟು ಅಲ್ಲ. ಇದು ಆಡಳಿತ ವ್ಯವಸ್ಥೆಯ ಸಂಪೂರ್ಣ ಕುಸಿತದ ಸೂಚನೆ. ದಿನಕ್ಕೊಂದು ಎಡವಟ್ಟು, ಕ್ಷಣಕ್ಕೊಂದು ಮುಖಭಂಗ. ಇನ್ನೆಷ್ಟು ದಿನ ಸ್ವಾಮಿ ಈ ಎಡವಟ್ಟು ಸರ್ಕಾರಕ್ಕೆ ಎಡವಟ್ಟು ಮುಖ್ಯಮಂತ್ರಿ ಆಗಿ ತಮ್ಮ ಗೌರವ ಕಳೆದುಕೊಳ್ಳುತ್ತೀರಿ. ಸಾಕು ಮಾಡಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕದ ಗೌರವ ಉಳಿಸಿ, ತಮ್ಮ ಇರೋಬರೋ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ ಎಂಬುದಾಗಿ ಎಚ್ಚರಿಸಿದ್ದಾರೆ.

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ!

ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ… pic.twitter.com/0u6zb6dgW5

— R. Ashoka (@RAshokaBJP) February 14, 2026

BREAKING: ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಭೀಕರ ದುರಂತ: ಓರ್ವ ಸಾವು, ಮೂವರಿಗೆ ಗಾಯ

Share. Facebook Twitter LinkedIn WhatsApp Email

Related Posts

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

2 Mins Read

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.